top of page

ವಿ.ವಿ.ಪುರಂ ಪೊಲೀಸ್ ಸ್ಟೇಷನ್

1.22 ಕೋಟಿ ಮೌಲ್ಯದ 1 ಕೆ.ಜಿ 570 ಗ್ರಾಂ ಚಿನ್ನ ಮತ್ತು ವಜ್ರದ ಆಭರಣಗಳ ವಶ

ree

ಕಳ್ಳರು ಮನೆಯ ಸೆಲ್ಲರ್‌ನಲ್ಲಿರುವ ಗ್ರಿಲ್‌ನ್ನು ಹೊಡೆದು ಮನೆಯೊಳಗೆ ಪ್ರವೇಶಿಸಿ ಮನೆಯ ಕೊಠಡಿಯ ಬೀರುವಿನಲ್ಲಿಟ್ಟಿದ್ದ ಸುಮಾರು 2 ಕೆ.ಜಿ ಚಿನ್ನ ಮತ್ತು ವಜ್ರದ ಆಭರಣಗಳನ್ನು ಕಳವು ಮಾಡಿಕೊಂಡು ಹೋಗಿರುವ ದೂರಿನ ತನಿಖೆಯನ್ನು ಮುಂದುವರೆಸಿದ ವಿವಿ ಪ್ಮರಂ ಪೊಲೀಸರು, ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು, ಖಚಿತ ಮಾಹಿತಿಯನ್ನು ಕಲೆಹಾಕಿ, ಈ ಹಿಂದೆ ಕಾರ್ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಓರ್ವ ವ್ಯಕ್ತಿಯು ಸೇರಿದಂತೆ ಇಬ್ಬರನ್ನು ಮಹಾರಾಷ್ಟ್ರದ ಸತಾರ ಜಿಲ್ಲೆಯ ಗೋಂದಲಿ ಗ್ರಾಮದಲ್ಲಿ ವಶಕ್ಕೆ ಪಡೆದು ವಿಚಾರಣೆಗೊಳಪಡಿಸಲಾಗಿರುತ್ತದೆ. ಆರೋಪಿಗಳ ವಶದಿಂದ ಸುಮಾರು 1.22 ಕೋಟಿ ಮೌಲ್ಯದ 1 ಕೆ.ಜಿ 570 ಗ್ರಾಂ ಚಿನ್ನಾಭರಣಗಳು ಮತ್ತು ವಜ್ರದ ಆಭರಣಗಳನ್ನು ವಶಪಡಿಸಿಕೊಳ್ಳಲಾಯಿತು.


ಈ ಕಾರ್ಯಾಚರಣೆಯನ್ನು ಬೆಂಗಳೂರು ನಗರದ ದಕ್ಷಿಣ ವಿಭಾಗದ ಉಪ ಪೊಲೀಸ್ ಆಯುಕ್ತ ಲೋಕೇಶ ಭರಮಪ್ಪ ಜಗಳಸರ್, ಐ.ಪಿ.ಎಸ್. ಮಾರ್ಗದರ್ಶನದಲ್ಲಿ ವಿ.ವಿ ಪುರಂ ಉಪ-ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮಿದ್ ಬಾಷಾ ನೇತೃತ್ವದಲ್ಲಿ, ವಿ.ವಿ.ಪುರಂ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಟಿ.ಎಂ.ಧರ್ಮೇಂದ, ಸಿಬ್ಬಂದಿಗಳ ತಂಡ ಪ್ರಕರಣವನ್ನು ಪತ್ತೆ ಮಾಡಲು ಯಶಸ್ವಿಯಾಗಿರುತ್ತಾರೆ.

 
 
 

Comments


© 2008 by Karnataka Police News Journal. All Rights Reserved.

bottom of page